ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಹಲವು ಜಿಲ್ಲೆಗಳಿಗೆ ರೆಡ್, ಯೆಲ್ಲೋ, ಆರೆಂಜ್ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು, ನಾಳೆ ರೆಡ್ ಅಲರ್ಟ್ ನೀಡಲಾಗಿದೆ. ಸಮುದ್ರದಲ್ಲಿ ಎತ್ತರದ ಅಲೆಗಳು ಏಳಲಿವೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹಾಗೂ ಸಮುದ್ರ ದಡದ ಬಳಿ ಪ್ರವಾಸಿಗರು ತೆರಳದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.
ಇನ್ನು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿಯೂ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಇಂದು, ನಾಳೆ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.