ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಆಗಸ್ಟ್ 27 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಯಾದಗಿರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ.