ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರಿ ಮಳೆ ಸುರಿದಿದೆ. ಇದರಿಂದಾಗಿ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ.
ಗುಡ್ಡ ಕುಸಿತ ಹಿನ್ನೆಲೆ ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳನ್ನು ಬೇರೆಡೆ ಸ್ಥಳಾಂತರಿಸಲಾಗಿದೆ. ಸ್ಥಳೀಯ ಆಡಳಿತ ಗುಡ್ಡದ ಭಾಗದಲ್ಲಿ ರಸ್ತೆ ಸಂಚಾರ ಬಂದ್ ಮಾಡಿದೆ. ನಾಲ್ಕು ದಿನದ ಹಿಂದೆ ಮುಟ್ಟಳ್ಳಿಯಲ್ಲಿ ಗುಡ್ಡ ಕುಸಿದು ಮನೆಯ ಮೇಲೆ ಬಿದ್ದು ನಾಲ್ವರು ಮೃತಪಟ್ಟಿದ್ದರು. ಈಗ ಮತ್ತೆ ಗುಡ್ಡ ಕುಸಿದಿರುವುದರಿಂದ ಜನರು ಆತಂಕಗೊಂಡಿದ್ದಾರೆ.