ಚಿಕ್ಕಮಗಳೂರು: ಮಲೆನಾಡಿನ ಭಾಗಗಳಲ್ಲಿ ಮಳೆ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಭಾರಿ ವಾಹನಗಳಿಗೆ ನಿಷೇಧ ಹೇರಲಾಗಿದೆ.
12 ಸಾವಿರ ಕೆಜಿ ಮೇಲ್ಪಟ್ಟ ವಾಹನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಈ ಹಿಂದೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಆದೇಶ ಮಾಡಲಾಗಿತ್ತು. ಈಗ ಜಿಲ್ಲೆಯಲ್ಲಿಯೇ 12 ಸಾವಿರ ಮೇಲ್ಪಟ್ಟು ತೂಕಗಳ ಸಂಚಾರ ಬಂದ್ ಮಾಡಲಾಗಿದೆ. ಮಳೆಯಿಂದ ರಸ್ತೆ ಕುಸಿತ ಭೀತಿಯಿಂದ ವಾಹನಗಳಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ.