ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೂರು ದಿನ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ನವೆಂಬರ್ 22 ರಿಂದ ನ.24ರವರೆಗೆ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. .
ನಾಳೆ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಮಧ್ಯಾಹ್ನ ಇಲ್ಲವೆ ಸಂಜೆ ನಂತರ ಒಂದೆರಡು ಕಡೆಗಳಲ್ಲಿ ಜಿಟಿ ಜಿಟಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನೂ, ಬಹಳಷ್ಟು ಪ್ರದೇಶಗಳಲ್ಲಿ ತುಂತುರು ಮಳೆ ಸುರಿಯುವ ಮುನ್ಸೂಚನೆಯಿದ್ದು, ಮೋಡ ಕವಿದ ವಾತಾವರಣದ ಹಿನ್ನೆಲೆ ಚಳಿ ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗರೇ ಗಮನಿಸಿ : ನಗರದ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ |Power Cut