ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣನ ಅಬ್ಬರ ಜೋರಾಗಿದ್ದು, ನಿನ್ನೆ ರಾತ್ರಿಯಿಡೀ ಮಳೆ ಸುರಿದಿದೆ.
ನಗರದ ಶಾಂತಿ ನಗರ, ಟೌನ್ ಹಾಲ್, ಮೆಜೆಸ್ಟಿಕ್, ಮಾರ್ಕೆಟ್, ವಿಜಯನಗರ, ಬಸವನಗುಡಿ, ವಿಲ್ಸನ್ ಗಾರ್ಡನ್, ಇಂದಿರಾನಗರ. ಕೆಂಗೇರಿ , ರಾಜಾಜಿನಗರ, ಮಲ್ಲೇಶ್ವರಂ ಸೇರಿ ಹಲವು ಕಡೆ ಮಳೆಯಾಗಿದೆ. ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳು ಜಲಾವೃತವಾಗಿದೆ. ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮುಂದಿನ ಐದು ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಮುಂದಿನ ಮೂರ್ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅ. 15ರವರೆಗೆ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ (Yellow Alert) ಘೋಷಿಸಿದೆ.
ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಎಲ್ಲೋ’ ಅಲರ್ಟ್ ಘೋಷಿಸಲಾಗಿದೆ.
ಮೈಸೂರಿನಲ್ಲಿ ಮಹಾಮಾರಿ ‘ಡೆಂಘೀ’ ಜ್ವರಕ್ಕೆ 8 ವರ್ಷದ ಕಂದಮ್ಮ ಬಲಿ |Dengue Disease
BIGG NEWS : ಬದರಿನಾಥ್-ಕೇದಾರನಾಥ ದೇಗುಲಕ್ಕೆ ಮುಖೇಶ್ ಅಂಬಾನಿ ಭೇಟಿ : 5 ಕೋಟಿ ದೇಣಿಗೆ | Mukesh Ambani