ಕೆಎನ್ಎನ್ಡಿಜಿಟಲ್ ಡೆಸ್ಕ್ : ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನಲೆ, ರಾಜ್ಯದ ಹಲವು ಕಡೆ ಮತ್ತೆ ಮಳೆ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಹಿನ್ನೆಲೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ 4-5 ದಿನ ಕರ್ನಾಟಕದಲ್ಲಿ (Karnataka Rains) ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಉತ್ತರ ಒಳನಾಡಿನ ಭಾಗದ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಹೀಗಾಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರದೇಶಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಇಂದು ಶುಕ್ರವಾರ ಬೆಳಗ್ಗೆ 8 : 30 ರಿಂದ ಶನಿವಾರದವರೆಗೆ ಶಿವಮೊಗ್ಗ, ದಾವಣಗೆರೆ, ಹಾವೇರಿ, ರಾಮನರ ಜಿಲ್ಲೆಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ, ಹಾಗೂ ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ ಅ. 2ರವರೆಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಾದ್ಯಂತ ಇಂದು ಮತ್ತು ನಾಳೆ ಕೆಲವು ಜಿಲ್ಲೆಗಳಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಮಳೆಯ ಸಿಂಚನ ಇರಲಿದೆ. ನಿನ್ನೆ ಸಹ ತುಂತುರು ಮಳೆಯಾಗಿದೆ. ಈ ಬಾರಿ ವಾಡಿಕೆಗಿಂತಲೂ ಹೆಚ್ಚಾಗಿ ಸುರಿದ ಮಳೆ ಪ್ರಭಾವದಿಂದಾಗಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದ ಬಹುತೇಕ ಜಲಾಶಯಗಳು ಭರ್ತಿಯಾಗಿವೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದಿನಿಂದ (ಸೆಪ್ಟೆಂಬರ್ 30) 4-5 ದಿನ ಕರ್ನಾಟಕದಲ್ಲಿ (Karnataka Rains) ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡಿನ ಭಾಗದ ಎಲ್ಲ ಜಿಲ್ಲೆಗಳಲ್ಲಿ ಇಂದಿನಿಂದ ಗುಡುಗು ಸಹಿತ ಮಳೆ ಆಗಲಿದೆ. ಹೀಗಾಗಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರದೇಶಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.