ಬೆಂಗಳೂರು: ರಾಜ್ಯದಲ್ಲಿ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಇನ್ನೂ ಮುಂದಿನ ಮೂರ್ನಾಲ್ಕು ದಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅ. 15ರವರೆಗೆ ಭಾರೀ ಮಳೆಯಾಗಲಿದೆ. ಇಂದು ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಹಳದಿ ಅಲರ್ಟ್ (Yellow Alert) ಘೋಷಿಸಿದೆ.
ಮುಂದಿನ 2 ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ‘ಎಲ್ಲೋ’ ಅಲರ್ಟ್ ಘೋಷಿಸಲಾಗಿದೆ.
ಸಿಎಂ ಬೊಮ್ಮಾಯಿ ಸಭೆ
ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.
ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಸಿಎಂ ಬೊಮ್ಮಾಯಿ, ಮಳೆಯಿಂದ ಹಾನಿಗೊಳಗಾಗುವ ಪ್ರತಿಯೊಂದು ಮನೆಗೆ ಪರಿಹಾರ ದೊರೆಯುವಂತೆ ಜಿಲ್ಲಾಧಿಕಾರಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.
ಮಳೆಯಿಂದ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯವಿದ್ದರೆ ಹೆಚ್ಚುವರಿ ಪರಿಹಾರ ವಿತರಿಸುವಂತೆ ಸುತ್ತೋಲೆ ಹೊರಡಿಸಬೇಕು ಎಂದು ವಿಪತ್ತು ನಿರ್ವಹಣೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ. ಬೆಳೆ ಹಾನಿ ಪರಿಹಾರ ವಿತರಣೆಯನ್ನು ತ್ವರಿತಗತಿಯಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆಹಾನಿಯನ್ನೂ ಸಹ ಕೂಡಲೇ ಸಮೀಕ್ಷೆ ನಡೆಸಿ ಈ ತಿಂಗಳೊಳಗೆ ಪರಿಹಾರ ವಿತರಿಸಲು ಸೂಚನೆ ನೀಡಿದ್ದಾರೆ.
ಇನ್ನು ಮಳೆಯಿಂದ ಹಾನಿಗೊಳಗಾದ ಸೇತುವೆಗಳ ಪುನರ್ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಕೆರೆಗಳು ದುರ್ಬಲಗಳಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
SHOCKING NEWS: ಮಗಳು ಬೆಡ್ಶೀಟ್ ತಂದುಕೊಡದಕ್ಕೆ ನೆತ್ತಿಗೇರಿದ ಕೋಪ: ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಂದ ಪತಿರಾಯ