ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 13 ರ ಇಂದಿನಿಂದ 7 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಮಂಡ್ಯ, ಮೈಸೂರು ಕೊಡಗು ಹಾಗೂ ಹಾಸನ ಜಿಲ್ಲೆಯ ಕೆಲವು ಕಡೆ ಭಾರಿ ಮಳೆ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಅಕ್ಟೋಬರ್ 16, 17ರಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಇನ್ನೂ 7 ದಿನ ಮಳೆರಾಯ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇಂದಿನಿಂದ 1 ವಾರದವೆರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಇಂದಿನಿಂದ 7 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.