ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಮಾನ್ ಡೋಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡು, ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಸೋಮವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
BIGG NEWS : ಗಂಗರ ಇತಿಹಾಸ ಅರಿಯಲು ಸಂಶೋಧನಾ ಪ್ರಾಧಿಕಾರ ರಚನೆ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗೊ್ಗ, ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಹಾಸನ, ಶಿವಮೊಗ್ಗ, ಕೊಒಡಗು, ಮಂಡ್ಯ, ಕೋಲಾರ, ತುಮಕೂರು ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.