ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ನಾಲ್ಕು ದಿನ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಹಾಗೂ ಅರಬ್ಬಿಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಮತರ, ತುಮಕೂರು, ಚಾಮರಾಜನಗರ, ಕಲಬುರಗಿ, ಬಳ್ಳಾರಿ, ಬೀದರ್ ಜಿಲ್ಲೆಗಳು ಮತ್ತು ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
BIGG NEWS : ಅಗತ್ಯ ಬಿದ್ದರೆ ಕರ್ನಾಟಕಕ್ಕೆ `ಯೋಗಿ ಮಾಡೆಲ್’ ಸರ್ಕಾರ ತರುತ್ತೇವೆ : ಸಿಎಂ ಬಸವರಾಜ ಬೊಮ್ಮಾಯಿ
ಇನ್ನು ಮೈಸೂರು, ದಾವಣಗೆರೆ, ಶಿವಮೊಗ್ಗ, ಹಾಸನ, ಗದಗ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಡೀ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿದ್ದು, ಜನರು ಪರದಾಡುವಂತಾಗಿದೆ. ಗದಗ ಜಿಲ್ಲೆಯಲ್ಲಿ ರಾತ್ರಿಯಿಡೀ ಭಾರಿ ಮಳೆಸುರಿದಿದ್ದು, ರಾಜಕಾಲುವೆ ಒಡೆದು ಅಪಾರ ಪ್ರಮಾಣದ ನೀರು ಮನೆಗಳಿಗೆ ನುಗ್ಗಿದೆ. ಬೆಟಗೇರಿಯ ವಾರ್ಡ್ ನಂಬರ್ 4ರ ಮಂಜುನಾಥ್ ನಗರ, ವಾಲ್ಮೀಕಿ ಅಂಬೇಡ್ಕರ್ ಬಡಾವಣೆಯಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದೆ.