ಬೆಂಗಳೂರು : ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣ ಇರುವುದರಿಂದ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಸೆ.1 ಮತ್ತು ಸೆ.4 ರಿಂದ 6 ರವರೆಗೆ ಯೆಲ್ಲೋ ಅಲರ್ಟ್, ಸೆ.2 ಮತ್ತು 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.