ಬೆಂಗಳೂರು : ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಇದೀಗ ಮತ್ತೆ ಚುರುಕುಗೊಂಡಿದೆ. ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಬರುವ ತೀವ್ರ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಶೇಷವಾಗಿ 14 ಜಿಲ್ಲೆಗಳು ಗಂಭೀರ ಮಳೆ ಅಪಾಯ ವಲಯದಲ್ಲಿ ಸೇರಿವೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ ಮುಂತಾದವು.