Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

​ವೈಜ್ಞಾನಿಕ ಸಂಶೋಧನೆ ಜನಸಾಮಾನ್ಯರಿಗೆ ತಲುಪಲು 17 ವರ್ಷ ಬೇಕು: ಅಧ್ಯಯನದಿಂದ ಅಚ್ಚರಿಯ ಮಾಹಿತಿ!

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Rain In Karnataka : ಇಂದು ರಾಜ್ಯದ ಹಲವೆಡೆ ಭಾರಿ ಮಳೆ : ಈ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ!
KARNATAKA

Rain In Karnataka : ಇಂದು ರಾಜ್ಯದ ಹಲವೆಡೆ ಭಾರಿ ಮಳೆ : ಈ ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ!

By ಸುರೇಶ್‌

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಸಹ ವರುಣನ ಆರ್ಭಟ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಬಲವಾದ ಗಾಳಿ, ಗುಡುಗು ಹಾಗೂ ಮಿಂಚು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ಏಳು ಜಿಲ್ಲೆಗಳಿಗೆ ಹೈ ಅಲರ್ಟ್

ರಾಜ್ಯದ ಒಟ್ಟು ಏಳು ಜಿಲ್ಲೆಗಳಲ್ಲಿ ಇಂದು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ (Orange Alert) ಘೋಷಿಸಿದೆ. ಮುಂಜಾಗ್ರತಾ ಕ್ರಮವಾಗಿ ಈ ಎಚ್ಚರಿಕೆಯನ್ನು ನೀಡಲಾಗಿದ್ದು, ಪ್ರಮುಖವಾಗಿ ಮಧ್ಯ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಶಿವಮೊಗ್ಗ, ಕೊಪ್ಪಳ, ಧಾರವಾಡ, ಗದಗ, ವಿಜಯನಗರ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಪ್ರಚಂಡ ಮಳೆಯಾಗುವ ಲಕ್ಷಣಗಳಿವೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲೂ ವರುಣನ ಅಬ್ಬರ

ಉಳಿದಂತೆ ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಮಳೆ ಮುಂದುವರಿಯಲಿದೆ. ಇದರೊಂದಿಗೆ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಹಾಗೂ ಚಾಮರಾಜನಗರದಲ್ಲಿಯೂ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಮತ್ತು ಉತ್ತರ ಕರ್ನಾಟಕದ ಸ್ಥಿತಿ

ರಾಜಧಾನಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಉತ್ತರ ಕರ್ನಾಟಕದ ಬಳ್ಳಾರಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದ್ದು, ಒಟ್ಟಾರೆ ರಾಜ್ಯದಾದ್ಯಂತ ಮುಂದಿನ 24 ಗಂಟೆಗಳಲ್ಲಿ ಮುಂಗಾರು ಪೂರ್ವ ಮಳೆ ಮತ್ತಷ್ಟು ಚುರುಕಾಗಲಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ.

Share. Facebook Twitter LinkedIn WhatsApp Email

Related Posts

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

1 Min Read

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

1 Min Read
Recent News

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

​ವೈಜ್ಞಾನಿಕ ಸಂಶೋಧನೆ ಜನಸಾಮಾನ್ಯರಿಗೆ ತಲುಪಲು 17 ವರ್ಷ ಬೇಕು: ಅಧ್ಯಯನದಿಂದ ಅಚ್ಚರಿಯ ಮಾಹಿತಿ!

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

State News
KARNATAKA

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 4 Mins Read

ಬೆಂಗಳೂರು: ಆಡಳಿತ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸುವ ಮತ್ತು ಜನಪರ ಕೆಲಸಗಳಿಗೆ ವೇಗ ನೀಡುವ ಉದ್ದೇಶದಿಂದ ಮಾನ್ಯ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳ…

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ಗ್ರಾಹಕರ ಗಮನಕ್ಕೆ : ಇಂದಿನಿಂದ ರಾಜ್ಯದ 20 ಪಟ್ಟಣಗಳಲ್ಲಿ ಬಿಲ್‌ ಪಾವತಿ ಸೇರಿ ಬೆಸ್ಕಾಂನ ಹಲವು ಆನ್‌ಲೈನ್ ಸೇವೆ 21 ದಿನ ಬಂದ್.!

BIG NEWS : ರಾಜ್ಯದಲ್ಲಿ ಸಾರ್ವಜನಿಕರ ಸುರಕ್ಷತೆಗೆ ರೌಡಿಸಂಗೆ ಅಂಕುಶ : ಸರ್ಕಾರದಿಂದ ವಿಶೇಷ ರೌಡಿ ನಿಗ್ರಹ ಪಡೆ ರಚನೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.