ಬೆಂಗಳೂರು : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 3 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಪ್ರವಾದಿ ನಿಂದನೆ : ನೂಪುರ್ ಶರ್ಮಾಗೆ ಲುಕೌಟ್ ನೋಟಿಸ್!
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಈಗಾಗಲೇ ಕೆಲ ಜಿಲ್ಲೆಯಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿನಿಂದಾಗಿ ಮುಂದಿನ ಮುಂದಿನ 3 ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಜುಲೈ 5 ರವರೆಗೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕೊಪ್ಪಳ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಇಂದೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ರಾಜ್ಯದ ಪಿಯು ತರಗತಿಗಳಿಗೆ ಡಿಸೆಂಬರೊಳಗೆ `NEP’ ಪಠ್ಯಕ್ರಮ : ಸಚಿವ ಬಿ.ಸಿ.ನಾಗೇಶ್
ಮಲೆನಾಡು ಭಾಗಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದಲ್ಲಿಯೂ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಹಾಗೆ ಜಿಲ್ಲೆಯಲ್ಲಿ ಈಗಾಗಲೇ ಆರೆಂಜ್ ಅಲರ್ಟ್ ನೀಡಲಾಗಿದೆ. ಜೊತೆಗೆ ಕರಾವಳಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಕೊಟ್ಟಿದ್ದಾರೆ.
Good News : ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : ಶೀಘ್ರವೇ `BBMP’ಯ 1032 ಹುದ್ದೆಗಳ ಭರ್ತಿ!