ಬೆಂಗಳೂರು : ರಾಜ್ಯದಲ್ಲಿ ವರುಣಾರ್ಭಟ ಮುಂದುವರೆದಿದ್ದು, ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಣ ಸುಲಿಗೆ ಆರೋಪ: ಮೂರನೇ ಬಾರಿಗೆ ಮೇಘಾಲಯ ಬಿಜೆಪಿ ನಾಯಕ ʻಬರ್ನಾಡ್ ಎನ್ ಮರಕ್ʼ ಅರೆಸ್ಟ್
ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆ. 2 ರ ಇಂದಿನಿಂದ ಸೆ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳುರು, ಶಿವಮೊಗ್ಗ, ಕೊಡಗು, ಹಾಸನ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Good News : ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : `KSRTC,BMTC’ ಬಸ್ ಪಾಸ್ ಅವಧಿ ವಿಸ್ತರಣೆ
ಇನ್ನು ಗುರುವಾರ ಸುರಿದ ಭಾರೀ ಮಳೆಯಿಂದಾಗಿ ರಾಜ್ಯದಲ್ಲಿ ನಾಲ್ವರು ಬಲಿಯಾಗಿದ್ದಾರೆ. ಮಂಡ್ಯದ ಸಾಹುಕಾರ್ ಚನ್ನಯ್ಯ ಬಡಾವಣೆಯಲ್ಲಿ ಮನೆ ಗೋಡೆ ಕುಸಿದು ಪಾರ್ವತಿ ಬಾಯಿ (75) ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಅಶೋಕ ಈರಯ್ಯ ಶಿವಪ್ಪಯ್ಯಮಠ (52) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ನರಗುಂದ ತಾಲೂಕಿನ ಚಿಕ್ಕನರಗುಂದ ಗ್ರಾಮದ ಗಾಣಿಗೇರ ಓಣಿಯ ಮಾಲಾ ಮಲ್ಲಿಕಾರ್ಜುನ್ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
BIGG NEWS : ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಗುಡ್ ನ್ಯೂಸ್ : ಕರ್ನಾಟಕ ಗ್ರಾಮಪಂಚಾಯಿತಿಗಳಿಗೆ 628 ಕೋಟಿ ರೂ.ಬಿಡುಗಡೆ