ಬೆಂಗಳೂರು : ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆ ಕರ್ನಾಟಕಕ್ಕೆ ಸೋನಿಯಾಗಾಂಧಿ, ಮಗನ ಜೊತೆಗೆ ಭಾರತ್ ಜೋಡೋ ಯಾತ್ರೆಗೆ ಹೆಜ್ಜೆ
ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳವಾರ ಕರಾವಳಿ, ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ನಾಳೆ ಗುಡುಗು ಸಹಿತ ಭಾರೀಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.