ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ರಾಜ್ಯದಲ್ಲಿ ಮುಂದಿನ ಮೂರು ದಿನಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಈ ಹಿನ್ನೆಲೆ ದಕ್ಷಿಣ ಒಳನಾಡು ಜಿಲ್ಲೆಯ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಡಿ. 8 ರಿಂದ ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಅಬ್ಬರ ಶುರುವಾಗಲಿದೆ. ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ದಾವಣಗೆರೆ, ಬಳ್ಳಾರಿ, ಹಾಸನ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರಿನ ಹಲವೆಡೆ ಮಳೆ ಕಂಡು ಬರಲಿದೆ. ಹಾಗೆಯೇ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
BIGG NEWS : ಮಾಸಿಕ ಪಿಂಚಣಿ ಪಡೆಯುತ್ತಿರುವ ಪಿಂಚಣಿದಾರರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಡಿಸೆಂಬರ್ 8, 9 ಮತ್ತು 10ರಂದು ಗುಡುಗು ಸಹಿತ ವ್ಯಾಪಕ ಮಳೆ ಬೀಳುವ ನಿರೀಕ್ಷೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ. ಉತ್ತರ ಒಳನಾಡಿನ ಭಾಗದಲ್ಲಿ ಮುಂದಿನ ಐದು ದಿನವು ಒಣಹವೆ ಕಂಡು ಬರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.