ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಜುಲೈ 1 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಬೆಂಗಳೂರಿನಲ್ಲಿ ‘ಕೊರೋನಾ ನಿಯಂತ್ರಣ’ಕ್ಕೆ ‘ಪರಿಷ್ಕೃತ ಮಾರ್ಗಸೂಚಿ’ ಬಿಡುಗಡೆ : ಈ ನಿಯಮ ಪಾಲನೆ ಕಡ್ಡಾಯ
ಇಂದಿನಿಂದ ಕರ್ನಾಟಕದ ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಉತ್ತರ ಕರ್ನಾಟಕದ ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Good News : ವಿದ್ಯಾರ್ಥಿಗಳಿಗೆ ಸಿಹಿಸುದ್ದಿ : `KSRTC’ ಬಸ್ ಪಾಸ್ ಅವಧಿ ವಿಸ್ತರಣೆ