ಬೆಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ರಾಜ್ಯದ ಜನತೆಗೆ ಹವಮಾನ ಇಲಾಖೆ ನೆಮ್ಮದಿಯ ಸುದ್ದಿ ನೀಡಿದೆ. ಇಂದಿನಿಂದ ಐದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ.