ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ ಮುಂದುವರೆದಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು, ಉತ್ತರ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.
BIGG BREAKING NEWS:ಮಾಜಿ CM ಹೆಚ್.ಡಿ ಕುಮಾರಸ್ವಾಮಿ ಬೆಂಗಾವಲು ವಾಹನ ಅಪಘಾತ; ಮೂವರಿಗೆ ಗಂಭೀರ ಗಾಯ
ಕರಾವಳಿಯ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ತಾಲೂಕುಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ತಾಲೂಕಿನ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಗದಗ ಜಿಲ್ಲೆಯಲ್ಲೂ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಗದಗ ಜಿಲ್ಲೆಯಲ್ಲಿ ಶಾಳೆಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಐ ಬಸವಲಿಂಗಪ್ಪ ಜಿ.ಎಂ. ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ತಡರಾತ್ರಿಯಿಂದ ಸುರಿಯುತ್ತಿರುವ ಮಳೆ ಸುರಿಯುತ್ತಿರುವ ಕಾರಣೆ ಗ್ರಾಮಗಳ ರಸ್ತೆಗಳ ನೀರು ಹರಿಯುತ್ತಿವೆ. ಜಿಲ್ಲೆಯಲ್ಲಿ ನಿರಂತವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚಚರಿಕೆ ಕ್ರಮವಾಗಿ ಶಾಲಾ,ಕಾಲೇಜುಗಳು ಮತ್ತು ಅಂಗವಾಡಿಗೆ ರಜೆ ಘೋಷಣೆ ಮಾಡಲಾಗಿದೆ.
BIGG BREAKING NEWS : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ಮತ್ತಿಬ್ಬರು ಪ್ರಮುಖ ಆರೋಪಿಗಳ ಬಂಧನ