ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಶುರುವಾಗಿದ್ದು, ನಿನ್ನೆ ರಾತ್ರಿ ರಾಜ್ಯದ ಹಲವಡೆ ಭಾರೀ ಮಳೆಯಾಗಿದ್ದು, ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ಥವಾಗಿರುವ ಘಟನೆ ನಡೆದಿದೆ.
ಧಾರವಾಡದಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ದೇಗುಲಕ್ಕೆ ನೀರು ನುಗ್ಗಿದೆ. ಶಿವಾಜಿ ವೃತ್ತದ ಬಳಿಯ ತುಳಜಾಭವಾನಿ ದೇಗುಲ ಸಂಪೂರ್ಣವಾಗಿ ಜಲಾವೃತವಾಗಿದೆ. ದೇವಸ್ಥಾನವನ್ನು ಸಂಪೂರ್ಣವಾಗಿ ಮಳೆಯ ನೀರು ಆವರಿಸಿಕೊಂಡಿದೆ. ಧಾರಾಕಾರ ಮಳೆಗೆ ಧಾರವಾಡದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಇಂದು, ನಾಳೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅಕ್ಟೋಬರ್ 1 ರ ನಾಳೆ ಒಳನಾಡಿನ ಗದಗ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.