ಬೆಂಗಳೂರು: ಕಳೆದ ಮೂರು ವಾರಗಳಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ಇದೀಗ ಜನರೆಲ್ಲ ನವರಾತ್ರಿಯ ಸಂಭ್ರಮದ ನಡುವೆ ಮತ್ತೆ ರಾಜ್ಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
BIGG NEWS: PFI&SDPI ಬೆಳೆಯಲು ಸಿದ್ದರಾಮಯ್ಯನವರೇ ಕಾರಣ; ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿಯ ಪರಿಣಾಮ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
BIGG NEWS: PFI&SDPI ಬೆಳೆಯಲು ಸಿದ್ದರಾಮಯ್ಯನವರೇ ಕಾರಣ; ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ
ಇಂದಿನಿಂದ ಸೆಪ್ಟೆಂಬರ್ 29ರ ವರೆಗೆ ಮಳೆಯಾಗಲಿದ್ದು, ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.