ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

BIGG NEWS : ನಾಳೆ 5 ಕೋಟಿ ಜನರಿಗೆ ‘ಆಯುಷ್ಮಾನ್ ಕಾರ್ಡ್’ ವಿತರಣೆ : ದೇಶದ ಯಾವುದೇ ‘ನೋಂದಾಯಿತ ಆಸ್ಪತ್ರೆ’ಗಳಲ್ಲಿ ಚಿಕಿತ್ಸೆ ಲಭ್ಯ|Ayushman Bharat Card

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಹಿಂಗಾರು ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಬೆಂಗಳುರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇನ್ನೂ ಡಿಸೆಂಬರ್ 9 ರಿಂದ 11 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಡಿ.9 ರಂದು ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

Share.
Exit mobile version