ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ಇನ್ನೂ 4-5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಸಾರ್ವಜನಿಕರೇ ಗಮನಿಸಿ ; ‘ಆಧಾರ್’ ಬಳಕೆಗೆ ಸಂಬಂಧಿಸಿದಂತೆ ‘UIDAI’ ಆದೇಶ, ಹೊಸ ನಿಯಮಗಳು ಇಂತಿವೆ.!