ಬೆಂಗಳೂರು: ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದ್ದು, ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು,ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಯಚೂರು, ಬೆಳಗಾವಿ, ಬೀದರ್, ಬಾಗಲಕೋಟೆ ಹಾಗೂ ಗುಲ್ಬರ್ಗಾ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದೆ. ಹಾಸನ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಮೈಸೂರು ಜಿಲ್ಲೆಯಲ್ಲೂ ಮಳೆಯಾಗಲಿದೆ ಅಂತ ತಿಳಿಸಿದೆ.