ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BREAKING NEWS : ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಮೂವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವು
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೂ 2 ದಿನ ಚಳಿ ಜೊತೆಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ರಾಜ್ಯದ 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
BIGG NEWS : ಡಿ.19 ರಿಂದ ಬೆಳಗಾವಿ ಅಧಿವೇಶನ : 6 ಮಸೂದೆ ಮಂಡನೆ, ಸದಸ್ಯರ ಹಾಜರಾತಿ ಕಡ್ಡಾಯ