ಬೆಂಗಳೂರು: ಕಳೆದ ವಾರದಿಂದ ಬಿಡುವುಕೊಟ್ಟಿದ್ದ ಮಳೆ ಮತ್ತೆ ಶುರುವಾಗಿದೆ. ರಾಜ್ಯದ ಹಲವು ಕಡೆ ಇಂದು ಧಾರಾಕಾರ ಮಳೆಯಾಗಿದ್ದು, ಮುಂದಿನ 24 ಗಂಟೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು ಸೇರಿ ಕೋಲಾರ, ಮಂಡ್ಯ. ಮೈಸೂರು. ರಾಮನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ತಮಿಳುನಾಡು ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿದ್ದು, ಸಮುದ್ರ ಮಟ್ಟದಿಂದ 7.7 ಕಿ.ಲೋ ಎತ್ತರದವರೆಹೆ ವ್ಯಾಪಿಸಿದೆ. ಈ ಮೇಲ್ಮೈ ಸುಳಿಗಾಳಿಯು ಉತ್ತರ ಒಳನಾಡಿನವರೆಗೂ ವ್ಯಾಪಿಸಿದೆ. ಹಾಗಾಗಿ ಮುಂದಿನ 5 ದಿನಗಳು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಇನ್ನೂ 5 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 5 ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಗುಡುಗು – ಮಿಂಚಿನ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಭ್ರಷ್ಟಾಚಾರ ತಡೆಯುವ ಪ್ರಾಮಾಣಿಕತೆ ಇಲ್ಲದ ಸಿಎಂ ಪ್ರಮಾಣ ಮಾಡಿದರೆ ಫಲ ಉಂಟೇ? – ಕಾಂಗ್ರೆಸ್
BIGG NEWS : ‘ರಾಜ್ಯೋತ್ಸವ ಪ್ರಶಸ್ತಿ’ : ಮುಂದಿನ ವರ್ಷ 60 ವರ್ಷ ವಯೋಮಿತಿ ನಿಯಮ ಬದಲಾವಣೆ : ಸಿಎಂ ಬೊಮ್ಮಾಯಿ ಘೋಷಣೆ