ಬೆಂಗಳೂರು: ರಾಜ್ಯದಲ್ಲಿ ಈಗಷ್ಟೇ ಆರಂಭವಾಗಿರುವ ಹಿಂಗಾರು ಮಳೆ ಸುರಿಸುವ ಈಶಾನ್ಯ ಮಾರುತಗಳು ಚುರುಕಾಗುವ ಲಕ್ಷಣಗಳು ಇದ್ದು, ಮುಂದಿನ ದಿನಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಕೇಂದ್ರ ಮುನ್ಸೂಚನೆ ನೀಡಿದೆ.
ಹೌದು, ಕೆಲ ದಿನಗಳಿಂದ ಎಡಬಿಡದೇ ಸುರಿದಿದ್ದಂತ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದರು. ಈ ಬಳಿಕ ಮಳೆ ಬಿಡುವು ಕೊಟ್ಟಿತ್ತು. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದಂತ ಮಳೆ ಮತ್ತೆ ಆರಂಭವಾಗಲಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಿಗೆ ಒಂದು ದಿನ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ ನೀಡಲಾಗಿದೆ.
ಉತ್ತರ ಒಳನಾಡಿನ ಭಾಗದಲ್ಲಿ ಮುಂದಿನ ಮೂರು ದಿನ ಮೋಡ ಕವಿದ ವಾತಾವರಣವಿರಲಿದ್ದು, ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬಹಳಷ್ಟು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಹಿಂಗಾರು ಮಳೆ ಅಬ್ಬರಿಸಲಿದೆ.
ಬೆಂಗಳೂರು ನಗರ ಮತ್ತು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಕೊಡಗು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.
ಇವಿಎಂನಲ್ಲಿ ಅಭ್ಯರ್ಥಿಯ ವಿವರ: ನಾಳೆ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿಯ ವಿಚಾರಣೆ
BIG NEWS: ‘ಸಚಿವ ಶ್ರೀರಾಮುಲು’ಗೆ ‘ಮೊಳಕಾಲ್ಮೂರು ಕ್ಷೇತ್ರ’ದಲ್ಲಿ ಸೋಲಿನ ಭೀತಿ: ‘ಹೊಸ ಕ್ಷೇತ್ರ’ಕ್ಕೆ ಹುಡುಕಾಟ?
BREAKING NEWS : ನಾಳೆ ವಿಜಯಪುರ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಪ್ರಕಟ