ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಪ್ರಧಾನಿ ಮೋದಿಗೆ ರಾಖಿ ಕಳುಹಿಸಿದ ಪಾಕ್ ಸಹೋದರಿ ; “ಮತ್ತೊಮ್ಮೆ ಪಿಎಂ ಆಗ್ತೀರಾ” ಎಂದು ಭವಿಷ್ಯ
ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ತುಸು ತಗ್ಗುವ ಲಕ್ಷಣಗಳಿವೆ. ಆದರೆ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಿಗೆ ಬುಧವಾರದವರೆಗೆ ಆರೆಂಜ್ ಅಲರ್ಟ್ ಇರಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಬುಧವಾರದವರೆಗೆ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ, ಹಾಸನ, ವಿಜಯಪುರ, ಬಾಗಲಕೋಟೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯಲ್ಲಿ ಮೂರು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಿಗೆ ಬುಧವಾರ ಬೆಳಗ್ಗೆ 8.30 ರಿಂದ ಶುಕ್ರವಾರದವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.