ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗುವ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ಕರಾವಳಿ ಸೇರಿದಂತೆ ರಾಜ್ಯ ಹಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ರಾಜ್ಯದಲ್ಲಿ 2 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆ ಸಾಧ್ಯತೆ ಎನ್ನಲಾಗುತ್ತಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಒತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
BIGG NEWS : ಬೆಸ್ಕಾಂ ಗ್ರಾಹಕರಿಗೆ ಗುಡ್ ನ್ಯೂಸ್ : ಮನೆಗಳಿಗೆ `ಉಚಿತ ಡಿಜಿಟಲ್ ವಿದ್ಯುತ್ ಮೀಟರ್’ ಅಳವಡಿಕೆ