ಬೆಂಗಳೂರು : ರಾಜ್ಯದಲ್ಲಿ ಮಳೆ ಬಿರುಸು ಪಡೆದಿದ್ದು, ಮುಂದಿನ ಎರಡು ದಿನ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಇಂದು ಮತ್ತು ನಾಳೆ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
BIGG NEWS : ರೈತ ಸಮುದಾಯಕ್ಕೆ ಮಹತ್ವದ ಮಾಹಿತಿ : ಕಿಸಾನ್ ಸಮ್ಮಾನ್ ಯೋಜನೆಯಡಿ ಇ-ಕೆವೈಸಿ ಮಾಡಿಸಿ
ಮೈಸೂರು, ಶಿವಮೊಗ್ಗ, ಹಾಸನ, ತುಮಕೂರು, ಹಾವೇರಿ, ಬೆಳಗಾವಿ, ಗದಗ, ಧಾರವಾಡ, ವಿಜಯಪುರ, ಕಲಬುರಗಿ ಮತ್ತು ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಶುಕ್ರವಾರ ಬೆಳಗಾವಿ, ಬಾಗಲಕೋಟೆ, ಮೈಸೂರು, ಚಾಮರಾಜನಗರ, ತುಮಕೂರು ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ.