ಬೆಂಗಳೂರು : ಮಾಂಡೌಸ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಮಳೆ ಹಿನ್ನೆಲೆಯಲ್ಲಿ ಇಂದು ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
BREAKING NEWS : ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು
ಮಾಂಡೌಸ್ ಚಂಡಮಾರುತದಿಂದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಕೋಲಾರ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಡಿ.12 ರ ಇಂದು ರಜೆ ಘೋಷಣೆ ಮಾಡಿ ಕೋಲಾರ ಡಿಡಿಪಿಐ ಕೃಷ್ಣ ಮೂರ್ತಿ ಆದೇಶ ಹೊರಡಿಸಿದ್ದಾರೆ. ಮೌಂಡೌಸ್ ಚಂಡಮಾರುತದಿಂದ ಹಿನ್ನೆಲೆ ನಿರಂತರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ
ಅದೇ ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು (ಡಿ.12) ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎನ್ ಎಂ ನಾಗರಾಜ್ ಆದೇಶ ಹೊರಡಿಸಿದ್ದಾರೆ. ಆದರೆ ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ನಾಳೆ ರಜೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇಂದೂ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.