ಬೆಂಗಳೂರು : ಬಂಗಾಳಿ ಕೊಲ್ಲಿಯಲ್ಲಿ ಮಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇದರ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 12 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದ ಪರಿಣಾಮ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರಿನಲ್ಲಿ ಡಿಸೆಂಬರ್ 12 ರ ವರೆಗೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಕೋಲಾರ, ಮೈಸೂರು ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗಲಿದೆ.
ಬಂಗಾಳಿ ಕೊಲ್ಲಿಯಲ್ಲಿ ಮಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಹವಾಮಾನ ಇಲಾಖೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಡಿಸೆಂಬರ್ 9 ರಂದು ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ.ಭಾರತೀಯ ಹವಾಮಾನ ಇಲಾಖೆಯು ಚೆನ್ನೈ, ಕಡಲೂರು, ವಿಲ್ಲುಪುರಂ, ಕಾಂಚೀಪುರಂ, ತಿರುವಳ್ಳೂರು ಮತ್ತು ವೆಲ್ಲೂರ್ನಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಡಿಸೆಂಬರ್ 9 ರಂದು ಪುದುಚೇರಿ ಮತ್ತು ಉತ್ತರದ ಒಳಭಾಗದ ತಮಿಳುನಾಡು ಮತ್ತು ರಾಯಲಸೀಮಾ ಕರ್ನಾಟಕ ಮತ್ತು ಕೇರಳ ಹಾಗೂ ಮಾಹೆಯಲ್ಲಿ ಭಾರೀ ಮಳೆಯಾಗುತ್ತದೆ”ಎಂದು ಹವಾಮಾನ ಇಲಾಖೆ ತಿಳಿಸಿದೆ.
ಡಿ.10 ಮತ್ತು 11 ಕ್ಕೆ, ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುತ್ತದೆ. ಕರ್ನಾಟಕದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ತಮಿಳುನಾಡು, ಪುದುಚೇರಿ, ದಕ್ಷಿಣ ಆಂಧ್ರಪ್ರದೇಶದ ಕರಾವಳಿಯಲ್ಲಿ ಗಂಟೆಗೆ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದ್ದು, ಈಗಾಗಲೇ ಕರಾವಳಿಗೆ ಮರಳಲು ಸೂಚಿಸಲಾಗಿದೆ.
BREAKING NEWS : ಇಂದು ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಭೇಟಿ : ಬಿಗಿ ಭದ್ರತೆ