ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಜನರು ರೋಸಿ ಹೋಗಿದ್ದಾರೆ. ಇದೀಗ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ಸೂಚನೆಯ ಪ್ರಕಾರ, ಇಂದು ಮತ್ತು ನಾಳೆ ಎರಡು ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಬುಧವಾರ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ. ಇದೇ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು (ಗುರುವಾರ) ಭಾರೀ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಚಾಮರಾಜನಗರ, ಕೊಡಗು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ
ಬೆಂಗಳೂರು ವ್ಯಾಪ್ತಿಯಲ್ಲಿ ಅಕ್ಟೋಬರ್ 20ರಂದು ಗುರುವಾರ ಮತ್ತೆ ಮಳೆ ಅಬ್ಬರಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೆಂಗಳೂರು ನಗರ ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಗುಡುಗು ಮಿಂಚು ಸಹಿತ ಧಾರಾಕಾರವಾಗಿ ಮಳೆ ಆಗುವ ಸಾಧ್ಯತೆಯಿದ್ದು, ನಗರದಾದ್ಯಂತ ಮೋಡ ಕವಿದ ವಾತಾವರಣ, ತಂಪು ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಾದ್ಯಂತ ಬುಧವಾರ ಸುರಿದ ಭಾರೀ ಮಳೆಗೆ ಮೆಜೆಸ್ಟಿಕ್ ಬಳಿ ಕಾಂಪೊಂಡ್ ಗೋಡೆ ಕುಸಿದು ರಸ್ತೆಯಲ್ಲಿ ನಿಲ್ಲಿಸಿದ್ದ ಹಲವಾರು ನಾಲ್ಕು ಚಕ್ರದ ವಾಹನಗಳಿಗೆ ಹಾನಿಯಾಗಿದೆ.ಬೆಂಗಳೂರಿನಲ್ಲಿ ಬುಧವಾರ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹಲವೆಡೆ ಜಲಾವೃತವಾಗಿದೆ. ಕಳೆದ ತಿಂಗಳು, ನಿರಂತರ ಭಾರೀ ಮಳೆಯಿಂದಾಗಿ ನಗರವು ತೀವ್ರ ಜಲಾವೃತಗೊಂಡ ನಂತರ ಬೆಂಗಳೂರು ಪ್ರವಾಹದಂತಹ ಪರಿಸ್ಥಿತಿಯನ್ನು ಅನುಭವಿಸಿತ್ತು. ಇದು ನಗರದ ಹಲವಾರು ಪ್ರದೇಶಗಳಲ್ಲಿ ಸಂಚಾರದ ಮೇಲೆ ಪರಿಣಾಮ ಬೀರಿತು. ಸೋಮವಾರ ಸುರಿದ ಮಳೆಯ ನಂತರ ರಸ್ತೆಗಳು ಮತ್ತು ಬೈಲೇನ್ಗಳಿಂದ ನೀರು ಇನ್ನೂ ಕಡಿಮೆಯಾಗದ ಕಾರಣ ಬೆಂಗಳೂರಿನ ಸ್ಥಳೀಯರು ತೀವ್ರ ಜಲಾವೃತವನ್ನು ಅನುಭವಿಸುತ್ತಿದ್ದಾರೆ.
BIGG NEWS : ಅ.28 ರಂದು ರಾಜ್ಯದ ಶಾಲೆಗಳಲ್ಲಿ ‘ಕೋಟಿ ಕಂಠ ಗಾಯನ’ : ಮೊಳಗಲಿದೆ ‘ಬಾರಿಸು ಕನ್ನಡ ಡಿಂಡಿಮವ’