ಬೆಂಗಳೂರು : ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಹಲವು ಕಡೆ ಭಾನುವಾರ (ನ.13) ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಐದು ದಿನಗಳ ಪೈಕಿ ಭಾನುವಾರ ದಕ್ಷಿಣ ಒಳನಾಡಿನ ಚಾಮರಾಜನರ ಮತ್ತು ಮೈಸೂರು ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಮೂರ್ನಾಲ್ಕು ದಿನ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಕರಾವಳಿ ಭಾಗದ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣವಾಗಿ ಮಳೆ ಸುರಿಯಲಿದ್ದು, ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದ ಹಲವು ಕಡೆ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಇನ್ನೂ ಎರಡು ಮೂರು ದಿನ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. . ನವೆಂಬರ್ 16ರಂದು ಈಶಾನ್ಯ ಬಂಗಾಳಕೊಲ್ಲಿಯಲ್ಲಿ ಮತ್ತೊಂದು ವಾಯುಭಾರ ಕುಸಿತ ನಿರ್ಮಾಣಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
BREAKING NEWS : ‘ಹೊನ್ನಾಳಿ ಚಂದ್ರು’ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ‘FSL’ ವರದಿಯಲ್ಲಿ ಸ್ಪೋಟಕ ಸತ್ಯ ಬಯಲು
ನೀವು ಬರೆದಿಟ್ಟುಕೊಳ್ಳಿ ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರೋದಿಲ್ಲ – ಪ್ರಹ್ಲಾದ್ ಜೋಶಿ