ಬೆಂಗಳೂರು : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗೆ ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ 5 ತಾಲೂಕುಗಳಲ್ಲಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ಸೋಮವಾರ ಪೇಟೆ, ವಿರಾಜಪೇಟೆ, ಮಡಿಕೇರಿ, ಕುಶಾಲನಗರ, ಪೊನ್ನಂಪೇಟೆ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಹಾಸನ ಜಿಲ್ಲೆ :
ಹಾಸನ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಹಾಸನ ಜಿಲ್ಲೆಯ 4 ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸಕಲೇಶಪುರ, ಬೇಲೂರು, ಆಲೂರು,ಅರಕಲಗೊಡು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಹೆಚ್ಚುವರಿ ಡಿಸಿ ಕವಿತಾ ರಾಜರಾಂ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆ
ಚಿಕ್ಕಮಗಳೂರು ಜಿಲ್ಲೆಯಲ್ಲೂ ಮಳೆಯ ಅಬ್ಬರ ಮುಂದುವರೆದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.