ಬೆಂಗಳೂರು : ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬೆಳಗಾವಿ, ಗದಗ, ಯಾದಗಿರಿ ಜಿಲ್ಲೆಗಳಲ್ಲಿ ನಾಳೆ ನಾಡಿದ್ದು ಭಾರಿ ಮಳೆಯಾಗುವ  ಸಾಧ್ಯತೆಯಿದೆ. ಹಾಗೂ  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮಂಡ್ಯ, ಚಿತ್ರದುರ್ಗ, ದಾವಣಗೆರೆ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೂಡ ಮುಂದಿನ ಮೂರು ದಿನ  ಮಳೆಯಾಗುವ ಮುನ್ಸೂಚನೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದಾನೆ. ಕೆಲವೊಮ್ಮೆ ಗುಡುಗು ಸಹಿತ ಮಳೆಯಾಗುವ ಸಾಧ್ಯಾತೆ ಎಂದು ಹವಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈಗಾಗಲೇ ಇಂದು(ಭಾನುವಾರ) ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇದೆ.

ಚಾಮರಾಜನಗರ, ಮಂಡ್ಯ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ರಾಯಚೂರು, ಯಾದಗಿರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

 

BIGG NEWS : ಸರಳ ವಾಸ್ತು ಗುರೂಜಿ ಮರ್ಡರ್ ಕೇಸ್ ಗೆ ಸ್ಪೋಟಕ ಟ್ವಿಸ್ಟ್ ; ಚಂದ್ರಶೇಖರ್ ಗುರೂಜಿ ಹತ್ಯೆ ಹಿಂದೆ ‘ಕೈ’ ನಾಯಕನ ಕೈವಾಡ..?

BREAKING NEWS : ಆಂಧ್ರಪ್ರದೇಶದಲ್ಲಿ ಪ್ರವಾಸಿ ಬಸ್ ಬೆಟ್ಟದಿಂದ ಬಿದ್ದು 10 ಮಂದಿ ಸಾವು, ಹವರಿಗೆ ಗಾಯ| tourist bus falls off hill

Share.
Exit mobile version