ಬೆಂಗಳೂರು : ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮುಂದಿನ ಒಂದು ವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇಂದಿನಿಂದ ಏಳು ದಿನಗಳು ಭಾರೀ ಮಳೆಯಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ, ಗಾಳಿ ಜಾಸ್ತಿ ಇರಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ.

Share.
Exit mobile version