ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಬೆಂಗಳೂರಿನಲ್ಲಿ ಇಂದು ನಿಗದಿಯಾಗಿದ್ದ ಬಿಜೆಪಿ `ಜನಸಂಕಲ್ಪ’ ಸಮಾವೇಶ ಮುಂದೂಡಿಕೆ
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇಂದು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.ಕರಾವಳಿ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ತುಂತುರು ಮಳೆಯಾಗುತ್ತಿದೆ. ಶನಿವಾರದಿಂದ ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ನಿರಂತರಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಇದೇ ವೇಳೆ ರಾಜ್ಯದ ಪ್ರದೇಶಗಳಲ್ಲಿ ವಿಪರೀತ ಚಳಿಯ ವಾತಾವರಣ ಮುಂದುವರೆದಿದೆ.
Good NEWS : ರಾಜ್ಯದ ಜನತೆಗೆ ಬೆಸ್ಕಾಂನಿಂದ ಭರ್ಜರಿ ಗುಡ್ ನ್ಯೂಸ್ : `ಸೌರ ಗೃಹ ಯೋಜನೆ’ಗೆ ಚಾಲನೆ