ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Good News ; ಪ್ರವಾಸಿಗರಿಗೆ ಭರ್ಜರಿ ನ್ಯೂಸ್ ; ಈಗ ಫ್ರೀಯಾಗಿ ‘ಐತಿಹಾಸಿಕ ಸ್ಮಾರಕ’ ವೀಕ್ಷಿಸ್ಬೋದು
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿಯ, ಮಲೆನಾಡು ಸೇರಿದಂತೆ ಸುಮಾರು 20 ಜಿಲ್ಲೆಗಳಲ್ಲಿ ಇಂದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಜಿಲ್ಲೆಗಳಲ್ಲಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ತುಮಕೂರು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಮಲೆನಾಡು ಪ್ರದೇಶಗಳಾದ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಗೇ ಮೈಸೂರು, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.