ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

BIGG NEWS : ಪದವಿ ಕಾಲೇಜು ವಿದ್ಯಾರ್ಥಿಗಳೇ ಗಮನಿಸಿ : ಇಂದಿನಿಂದ ಅ.9 ರವರೆಗೆ ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ ಜಿಲ್ಲೆಗಳು ಸೇರಿದಂತೆ ಮುಂದಿನ ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್ 1 ಹಾಗೂ 2 ರಂದು ಬಾಗಲಕೋಟೆ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

BIG NEWS: ಇಂದಿನಿಂದ ಎಲ್ಲರಿಗೂ ಅನ್ವಯಿಸುವುದಿಲ್ಲ ಈ ಪಿಂಚಣಿ ಯೋಜನೆ… ಇಲ್ಲಿದೆ ಮಹತ್ವದ ಮಾಹಿತಿ | Pension Scheme

ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share.
Exit mobile version