ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗಲಿದೆ ( Heavy Rain ) ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ( Yellow Alert ) ಕೂಡ ಘೋಷಣೆ ಮಾಡಿದೆ.
BREAKING NEWS : ನೈಜೀರಿಯಾದಲ್ಲಿ ಪ್ರವಾಹಕ್ಕೆ ಸಿಲುಕಿ ಮುಳುಗಿದ ದೋಣಿ: 76 ಮಂದಿ ಸಾವು | Nigeria boat accident
ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ಅಕ್ಟೋಬರ್ 10ರ ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ. ಇಂದು ಮತ್ತು ನಾಳೆ ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಿದೆ.
ಇನ್ನೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಬೆಂಗಳೂರು ನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಮಗಳೂರು ಮಂಡ್ಯ, ರಾಮನಗರ, ದಾವಣಗೆರೆ, ಮೈಸೂರು, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದಂತ ಕಲಬುರ್ಗಿ, ವಿಜಯಪುರ, ಗದಗ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಯಲ್ಲೂ ಮುಂದಿನ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಮಳೆರಾಯ ಅಬ್ಬರಿಸಲಿದ್ದಾನೆ. ಗುಡುಗು ಸಹಿತ ಮಳೆಯಾಗಲಿದ್ದು, ಎಚ್ಚರಿಕೆಯಿಂದ ಇರುವಂತೆ ಮುನ್ಸೂಚನೆ ನೀಡಿದೆ.