ಬೆಂಗಳೂರು : ಉತ್ತರ ಕರ್ನಾಟಕದ ಹಲವು ಜಿಲ್ಲೆಗಳು ಸೇರಿದಂತೆ ರಾಜ್ಯಾದ್ಯಂತ ಇಂದೂ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ದೇಶದ ರೈತರಿಗೆ ದೀಪಾವಳಿ ಗಿಫ್ಟ್ : ಇಂದು ಖಾತೆಗೆ ಹಣ ಜಮಾ, `ಒಂದು ದೇಶ-ಒಂದು ರಸಗೊಬ್ಬರ’ ಯೋಜನೆಗೆ ಚಾಲನೆ
ಇಂದು ಉತ್ತರ ಕರ್ನಾಟಕದ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಲೆನಾಡಿನ ಜಿಲ್ಲೆಗಳಲ್ಲೂ ಇಂದು ಮಳೆ ಅಬ್ಬರ ಮುಂದುವರೆಯಲಿದ್ದು, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIG NEWS : ʻಬಳ್ಳಾರಿ ಜೀನ್ಸ್ ಅನ್ನು ಜಾಗತಿಕ ಬ್ರಾಂಡ್ ಮಾಡುತ್ತೇನೆʼ: ರಾಹುಲ್ ಗಾಂಧಿ ಭರವಸೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,ರಾಮನಗರ,ಚಿತ್ರದುರ್ಗ, ದಾವಣಗೆರೆ, ಮಂಡ್ಯ,ಮೈಸೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.