ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಎರಡು ದಿನ ಮಳೆಯ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

PM Awas Yojana : ವಸತಿ ರಹಿತ ಬಡಜನತೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಇಂದೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು,ದಕ್ಷಿಣ ಕನ್ನಡ, ಉತ್ತರಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆ ಕೊಂಚ ಹೆಚ್ಚಾಗಲಿದೆ. ಉತ್ತರ ಒಳನಾಡಿನ ಧಾರವಾಡ, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Share.
Exit mobile version