ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ಡಿಸೆಂಬರ್ 12 ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
BIGG NEWS : ಶಾಲಾ ಮಕ್ಕಳ ಅಪೌಷ್ಠಿಕತೆ, ರಕ್ತಹೀನತೆ ಪರೀಕ್ಷೆ ಮಾಡಿ : ಆರೋಗ್ಯ ಕೇಂದ್ರಗಳಿಗೆ ಸಚಿವ ಸುಧಾಕರ್ ಸೂಚನೆ
ಬಂಗಾಳಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದ ಪರಿಣಾಮ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ, ಮೈಸೂರು, ತುಮಕೂರಿನಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆಯಿಂದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.