ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ 4 ದಿನ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 4 ದಿನ ಭಾರೀ ಮಳೆಯಾಗಲಿದೆ. ಸೆ. 7ರಿಂದ 9ರವರೆಗೆ ಮಾತ್ರ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇಂದಿನಿಂದ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದಿನಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BREAKING NEWS : ಬೆಂಗಳೂರು ನಗರದಲ್ಲಿ ಮಹಾಮಳೆಗೆ ಯುವತಿ ಬಲಿ : ವಿದ್ಯುತ್ ಸ್ಪರ್ಶಿಸಿ ಬಿಕಾಂ ಪದವೀಧರೆ ಸಾವು