ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜಮ್ಮು & ಕಾಶ್ಮೀರ ಕತ್ರಾದಲ್ಲಿ ಭೂಕಂಪ: 3.9 ತೀವ್ರತೆ ದಾಖಲು | Earthquake in Katra
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮುಂದಿನ 3 ದಿನಗಳಲ್ಲಿ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಮೈಸೂರು, ಹಾಸನ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಭುವನೇಶ್ವರ ಬಳಿ ಹಳಿತಪ್ಪಿದ ಗೂಡ್ಸ್ ಟ್ರೇನ್ನ ಐದು ವ್ಯಾಗನ್: ರೈಲುಗಳ ಸಂಚಾರ ಸ್ಥಗಿತ
ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.