ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ3 ದಿನ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ 3 ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
BIGG NEWS : ಸಚಿವ ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಸಂತಾಪ
ಇಂದಿನಿಂದ ಶುಕ್ರವಾರದವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇಂದಿನಿಂದ ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು, ಬೀದರ್, ಕಲಬುರಗಿ, ವಿಜಯಪುರ, ಗದಗ, ಧಾರವಾಡ, ಹಾವೇರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮುಂದಿನ3 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
BIGG NEWS : ರಾಜ್ಯದಲ್ಲಿ ಮತ್ತೊಂದು ನೇಮಕಾತಿ ಹಗರಣ ಬಯಲಿಗೆ : ಸುಳ್ಳು ದಾಖಲೆ ನೀಡಿ ನೇಮಕಗೊಂಡಿದ್ದ 11 ಶಿಕ್ಷಕರ ಬಂಧನ
ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿಯಲ್ಲಿ ಅಪಾಯಕಾರಿ ಗಾಳಿ ಬೀಸುವ ಮುನ್ಸೂಚನೆಯಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.