ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Big news: ಚಿಕ್ಕ ಮಕ್ಕಳಲ್ಲಿ `ಟೊಮೆಟೊ ಜ್ವರ’ದ ಅಪಾಯ ಹೆಚ್ಚು: ಅಧ್ಯಯನ | tomato flu
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಎರಡು ದಿನ ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಕೆಲ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ 60 ಕಿ.ಮೀ. ವರೆಗೂ ವೇಗದ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.
ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಹಾಗೂ ಕೋಲಾರ ಜಿಲ್ಲೆಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.